ನ್ಯಾಷನಲ್ ಕ್ರಷ್ ಎಂದೇ ಖ್ಯಾತಿಯಾದವರು ನಟಿ ರಶ್ಮಿಕಾ ಮಂದಣ್ಣ. ಇವರು ಸದಾ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ಪೋಸ್ಟ್ ಒಂದು ಮಾಡಿ ಸುದ್ದಿಯಾಗಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ರಶ್ಮಿಕಾ ಮಂದಣ್ಣ ಯಾವುದೇ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿರಲಿಲ್ಲ. ಇದಕ್ಕೆ ಒಂದು ಕಾರಣ ಇದೆ. ಅದರ ಬಗ್ಗೆಯೇ ರಶ್ಮಿಕಾ ಮಂದಣ್ಣ ವಿವರವಾಗಿ ಬರೆದು ಪೋಸ್ಟ್ ಹಾಕಿದ್ದಾರೆ. ತಾವು ಏಕೆ ಎಲ್ಲೂ ಕಾಣಿಸಿಕೊಂಡಿಲ್ಲ? ಅನ್ನೋ ವಿಚಾರ ಬಹಿರಂಗಗೊಳಿಸಿದ್ದಾರೆ. “ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.
ಒಂದು ತಿಂಗಳು ಜಾಲತಾಣದಲ್ಲಿ ಆಯಕ್ಟಿವ್ ಆಗಿರಲಿಲ್ಲ. ಸಣ್ಣ ಅಪಘಾತವೇ ಇದಕ್ಕೆ ಕಾರಣ. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಮತ್ತೆ ಬಿಜಿಯಾಗುತ್ತೇನೆ. ಬದುಕು ಬಹಳ ಅಮೂಲ್ಯವಾಗಿದ್ದು, ತುಂಬಾ ಹುಷಾರಾಗಿರಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಜೀವನದಲ್ಲಿ ಏನಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಏಕೆಂದರೆ, ಜೀವನ ತುಂಬಾ ಅನಿರೀಕ್ಷಿತವಾಗಿದೆ. ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ, ನೆಮ್ಮದಿಯಿಂದ ಬದುಕಬೇಕು ಎಂದು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ರಶ್ಮಿಕಾ ಬರೆದುಕೊಂಡಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಅಪ್ಡೇಟ್ ಕೊಡುವುದಾಗಿ ತಿಳಿಸಿದ್ದಾರೆ.