Categories: ಮನರಂಜನೆ

ಹುಟ್ಟುಹಬ್ಬದ ಸಂಭ್ರಮದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಇಂರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕನ್ನಡದ ಕಿರಿಕ್​ ಹುಡುಗಿ 2೮ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ನಟಿಗೆ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಕಿರಿಕ್ ಪಾರ್ಟಿ ಸಿನಿಮಾದ ಮೂಲಕ. 2016ರಲ್ಲಿ ರಿಲೀಸ್ ಆದ ಈ ಸಿನಿಮಾದ ಮೂಲಕ ರಕ್ಷಿತ್ ಶೆಟ್ಟಿ ರಶ್ಮಿಕಾ ಮಂದಣ್ಣರನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಸಾನ್ವಿ ಜೋಸೆಫ್ ಆಗಿ ಅಭಿನಯಿಸಿದ್ದ ರಶ್ಮಿಕಾ, ಕನ್ನಡದ ಸುಂದರಿಯಾಗಿ ಕನ್ನಡಿಗರ ಮನೆ, ಮನ ಸೇರಿದ್ದರು.

2018ರಲ್ಲಿ ತೆರೆ ಕಂಡ ಚಲೋ ಎಂಬ ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ ತೆಲುಗಿಗೆ ಎಂಟ್ರಿ ಕೊಟ್ರು. ನಾಗಶೌರ್ಯ ಹೀರೋ ಆಗಿ ನಟಿಸಿದ್ದ ಈ ಸಿನಿಮಾದಲ್ಲಿ ರಶ್ಮಿಕಾ ತೆಲುಗು ಚಿತ್ರ ರಸಿಕರ ಪಾಲಿನ ಫೆವರೇಟ್ ಆದ್ರು. ಸಿನಿಮಾ ಅಷ್ಟೇನೂ ಯಶಸ್ಸು ಕಾಣಲಿಲ್ಲ. ಆದರೆ ರಶ್ಮಿಕಾ ಮಂದಣ್ಣಗೇ ಈ ಸಿನಿಮಾವೇ ತೆಲುಗು ಚಿತ್ರರಂಗಕ್ಕೆ ರೆಡ್ ಕಾರ್ಪೆಟ್ ಹಾಸಿತು.

ಅದೇ ವರ್ಷ ತೆಲುಗಿನಲ್ಲಿ ತೆರೆ ಕಂಡ ಗೀತ ಗೋವಿಂದ ರಶ್ಮಿಕಾ ಮಂದಣ್ಣ ಸಿನಿ ಕೆರಿಯರ್ ಅನ್ನೇ ಬದಲಾಯಿಸಿತು. ವಿಜಯ್ ದೇವರಕೊಂಡ ನಾಯಕನಾಗಿದ್ದ ಈ ಸಿನಿಮಾದಲ್ಲಿ ಗೀತ ಆಗಿ ರಶ್ಮಿಕಾ ಕಾಣಿಸಿಕೊಂಡರು. ಸಿನಿಮಾ ಬಿಗ್ ಹಿಟ್ ಆಗುವುದರೊಂದಿಗೆ ರಶ್ಮಿಕಾ ಮಂದಣ್ಣ ತೆಲುಗಿನಲ್ಲಿ ಭದ್ರವಾಗಿ ನೆಲೆಯೂರಿದರು.

ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸುವಾಗಲೇ ರಶ್ಮಿಕಾಗೆ ಕರ್ನಾಟಕ ಕ್ರಶ್ ಎಂದು ಖ್ಯಾತಿ ಪಡೆದರು. ಆನಂತರ ಅವರನ್ನು ನ್ಯಾಷನಲ್ ಕ್ರಶ್ ಎಂದು ಫೇಮಸ್ ಆದರು. ಕನ್ನಡ, ಹಿಂದಿ, ತೆಲುಗು, ತಮಿಳಿ ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ರಶ್ಮಿಕಾ, ಅನೇಕ ಬಿಗ್ ಹಿಟ್ಗಳನ್ನು ನೀಡಿದ್ದಾರೆ.  ಇಂದು ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬದ ಪ್ರಯುಕ್ತ ‘ದಿ ಗರ್ಲ್‌ಫ್ರೆಂಡ್‌’ ಟೀಸರ್ ಬಿಡುಗಡೆಯಾಗಲಿದೆ.

 

Ashitha S

Recent Posts

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

5 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

10 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

26 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

36 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

51 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago