Bengaluru 21°C
Ad

ರವೀನಾ ಟಂಡನ್ ಕಾರು ಅಪಘಾತ: ಸ್ಥಳೀಯರಿಂದ ನಟಿ ಮೇಲೆ ಹಲ್ಲೆ, ವಿಡಿಯೋ ವೈರಲ್

ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮುಂಬೈ: ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿದೆ. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ವಿಡಿಯೋಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಕಾಣಬಹುದು.

ರವೀನಾ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು.

ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ. ಘಟನೆ ಕುರಿತು ರವೀನಾ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad