ಬೆಂಗಳೂರು: ಪಂಚಾನನ ಫಿಲಂಸ್ ನಿರ್ಮಾಣದ, ಕಿಶೋರ್ ಮೂಡುಬಿದ್ರೆ ನಿರ್ದೇಶನದ ವಿಜಯ್ ರಾಘವೇಂದ್ರ ಮುಖ್ಯ ಪಾತ್ರದಲ್ಲಿ ನಟಿಸಿರುವ ʼರಿಪ್ಪನ್ ಸ್ವಾಮಿʼ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಚಿತ್ರತಂಡ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ ಚಿನ್ನಾರಿ ಮುತ್ತ ರಾ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ವಿಶೇಷ ಎಂದರೆ ʼಮಾಲ್ಗುಡಿ ಡೇಸ್ʼ ಸಿನಿಮಾದಲ್ಲಿ ವಿಜಯ ರಾಘವೇಂದ್ರ ನಾಯಕನಾಗಿದ್ದರು. ಹೀಗಾಗಿ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಮೂಡಿಸಿದೆ. ತಾರಾಗಣದಲ್ಲಿ ಅಶ್ವಿನಿ ಚಂದ್ರಶೇಖರ್, ಪ್ರಕಾಶ್ ತುಮ್ಮಿ ನಾಡು, ವಜ್ರದೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್ ಮುಂತಾದವರು ಇದ್ದಾರೆ.

