ಮೈಸೂರು:  ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂತಾರ ಚಾಪ್ಟರ್ 1 ಯಶಸ್ವಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ.

ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ ರೀತಿ ಈ ಬಾರಿಯೂ ಇನ್ನೊಂದು ಚಾಪ್ಟರ್ ಜನರಿಗೆ ತಲುಪಿರುವ ರೀತಿ ಹಾಗೂ ಅವರು ಒಪ್ಪಿಕೊಂಡಿರುವ ರೀತಿ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು.