ರಾಷ್ಟೀಯ ಪ್ರಶಸ್ತಿ ಬಂದಿರುವ ಕುರಿತು ನಟ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಶಸ್ತಿ ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿರುವುದು ಗೊತ್ತಾಗಿದೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ನಮ್ಮ ಸಿನಿಮಾ ತಂಡಕ್ಕೂ ಅಭಿನಂದನೆ ಹೇಳುತ್ತೇನೆ. ಕಾಂತಾರ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿಯಾಗಿದೆ. ಈ ಒಂದು ಪ್ರಶಸ್ತಿಯನ್ನು ನಾನು ದೈವಕ್ಕೆ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದರು.

ಇಡೀ ಚಿತ್ರತಂಡಕ್ಕೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ನನ್ನ ಪತ್ನಿಗೂ ಕೂಡ ಧನ್ಯವಾದ ಹೇಳುತ್ತೇನೆ. ಸಿನಿಮಾವನ್ನು ಜನ ನೋಡಿ ಮೆಚ್ಚುವುದು ಮುಖ್ಯವಾಗಿದೆ. ತುಂಬಾ ಜನ ಕರೆ ಮಾಡಿ ನನಗೆ ಶುಭಾಶಯ ತಿಳಿಸಿದ್ದಾರೆ ಎಂದು ನಟ ರಿಷಬ್ ಶೆಟ್ಟಿ ತಿಳಿಸಿದರು.

ಇನ್ನು ಕನ್ನಡದ ಕಾಂತಾರ ಸಿನಿಮಾಗೆ ಎರಡು ಪ್ರಶಸ್ತಿ ಲಭಿಸಿದ್ದು, ಒಂದು ಕಾಂತಾರ ಸಿನಿಮಾ ನಟನೆಗಾಗಿ ನಟ ರಿಶಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನೊಂದು ಅತ್ಯುತ್ತಮ ಮನರಂಜನಾ ಸಿನಿಮಾ ಪ್ರಶಸ್ತಿ ಕೂಡ ಕಾಂತಾರ ಸಿನಿಮಾ ಪಾಲಾಗಿದೆ.