Bengaluru 22°C
Ad

ಕರ್ನಾಟಕದಲ್ಲಿ ‘ಇಂಡಿಯನ್ 2’ ವಿತರಣಾ ಹಕ್ಕು ಪಡೆದ ರೋಮಿಯೋ ಪಿಕ್ಚರ್

ಕಮಲ್ ಹಾಸನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಇಂಡಿಯನ್ 2’ ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.  ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಈ ಚಿತ್ರವನ್ನು ನಿರ್ಮಿಸಿದೆ.

ಕಮಲ್ ಹಾಸನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಇಂಡಿಯನ್ 2’ ಚಿತ್ರ ಜುಲೈ 12 ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಹಾಗೂ ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಈ ಚಿತ್ರವನ್ನು ನಿರ್ಮಿಸಿದೆ.

ಕಮಲ್ ಹಾಸನ್, ಸಿದ್ಧಾರ್ಥ್, ಕಾಜಲ್ ಅಗರವಾಲ್, ರಕುಲ್ ಪ್ರೀತ್ ಸಿಂಗ್ , ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಕನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು “ಇಂಡಿಯನ್ 2” ಚಿತ್ರದ ತಾರಾಬಳಗದಲ್ಲಿದ್ದಾರೆ.

ಕರ್ನಾಟಕದಲ್ಲಿ ಈ ಚಿತ್ರ ಪ್ರತಿಷ್ಠಿತ ರೋಮಿಯೋ ಪಿಕ್ಟ್ರ್ಸ್ ಮೂಲಕ ಬಿಡುಗಡೆಯಾಗಲಿದೆ. ಹೆಸರಾಂತ ಸಂಸ್ಥೆಯು ಇಂಡಿಯನ್ 2 ಚಿತ್ರದ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.

ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರವನ್ನು ಕರ್ನಾಟಕದಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ರೋಮಿಯೋ ಪಿಕ್ಚರ್ ನ ರಾಹುಲ್ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad