ಬೆಂಗಳೂರು: ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ 25 ಸಾವಿರ ರೂ. ನಗದು ಮತ್ತು ಕಂಚಿನ ಫಲಕ ಮತ್ತುಸ್ಮರಣಿಕೆ ಒಳಗೊಂಡಿದೆ. ಜು.13ರಂದು ಸಂಜೆ 5 ಗಂಟೆಗೆ ಗಾಂಧಿ ಭವನದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ಶಿಕ್ಷಣ ತಜ್ಞ ವೂಡೇ ಪಿ.ಕೃಷ್ಣ ಸೇರಿದಂತೆ ಮತ್ತಿತರರ ಭಾಗವಹಿಸಲಿದ್ದಾರೆ.

ಹಿರಿಯ ನಟಿ ಲಕ್ಷ್ಮೀದೇವಿ ಅವರು ಕನ್ನಡ ಸಿನಿಮಾರಂಗಕ್ಕೆ ನೀಡುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.