Bengaluru 22°C
Ad

ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ : ಆರ್‌ಸಿಬಿ ಮಾಜಿ ಆಟಗಾರನಿಂದ ಬಿಡುಗಡೆ

ಮಹಿಳಾ ಕ್ರಿಕೆಟ್‌ ಆಧಾರಿತ ಸಿನಿಮಾ ʻಸಹಾರʼ ಟ್ರೈಲರ್‌ಇಂದು ಒಂದು ಖಾಸಗಿ ಹೋಟೇಲ್‌ ನಲ್ಲಿ ಬಿಡುಗಡೆಗೊಂಡಿದೆ.ಆರ್‌ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಮಹಿಳಾ ಕ್ರಿಕೆಟ್‌ ಆಧಾರಿತ ಸಿನಿಮಾ ʻಸಹಾರʼ ಟ್ರೈಲರ್‌ಇಂದು ಒಂದು ಖಾಸಗಿ ಹೋಟೇಲ್‌ ನಲ್ಲಿ ಬಿಡುಗಡೆಗೊಂಡಿದೆ.ಆರ್‌ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟ್ರೈಲರ್‌ ಬಳಿಕ ಮಾತನಾಡಿದ ಕೃಷ್ಣಪ್ಪ ಗೌತಮ್‌, ʻʻಕ್ರಿಕೆಟ್ ಕಥೆಯನ್ನು ಒಳಗೊಂಡಿರುವ ಚಿತ್ರ ಇದು. ಟ್ರೈಲರ್‌ ತುಂಬ ನೈಜವಾಗಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿʼʼ ಎಂದರು. ಮಜೇಶ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಸ್ಪೂರ್ತಿದಾಯಕವಾಗಿದೆ ಎಂದರು.

ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ʻಸಹಾರಾʼದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ.ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ಎಂಬುದು ವಿಷೇಶ.

Ad
Ad
Nk Channel Final 21 09 2023
Ad