ಮುಂಬೈ : ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರ ಪತಿ ಸೈಫ್ ಅಲಿ ಖಾನ್ರನ್ನ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿದೆ. ಜೊತೆಗೆ ಭುಜದ ಮೂಳೆ ಮುರಿತವಾಗಿದೆ. ಹೀಗಾಗಿ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ಸೈಫ್ ಜೊತೆ ಅವರ ಪತ್ನಿ ಕರೀನಾ ಕಪೂರ್ ಖಾನ್ ಕೂಡ ಇದ್ದಾರೆ.
ಸೈಫ್ ಅಲಿ ಖಾನ್ ಪ್ರಸ್ತುತ ಸೌತ್ ಚಿತ್ರ ‘ದೇವರ’ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ನಟ ಅಥವಾ ಸಿನಿಮಾ ತಂಡದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.