ಸಲಾರ್ ಸಿನಿಮಾ ಥಿಯೇಟರ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ ಕೋಟಿ ಕೋಟಿ ಹಣವನ್ನು ಗಳಿಸಿದೆ. ಈ ನಡುವೆ ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೆಟ್ ಫ್ಲಿಕ್ಸ್ ಸಲಾರ್ ಸಿನಿಮಾವನ್ನು ಖರೀದಿಸಿದ್ದು ಫೆಬ್ರವರಿ ಮೊದಲ ವಾರದಿಂದ ಸ್ಟ್ರೀಮಿಂಗ್ ಬಿಡುಗಡೆಯಾಗಲಿದೆ. ಸಲಾರ್ ಸಿನಿಮಾ ಹೀಗಾಗಲೇ ಸ್ಪ್ಯಾನಿಷ್ ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ಹೇಳಿದೆ.
ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಪ್ರಾರಂಭಿಸಿದಲಿದ್ದಾರೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.