ಸಲ್ಮಾನ್ ಖಾನ್ಗೆ 58 ವರ್ಷ ಮುಗಿದಿದೆ. ಇನ್ನು ಕೆಲವೇ ತಿಂಗಳಲ್ಲಿ (ಡಿ. 27) 59ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಅವರು ನಿತ್ಯ ಜಿಮ್ ಮಾಡುತ್ತಾರೆ. ಸಿನಿಮಾಗಳಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಮಾಡೋಕೆ ಆದ್ಯತೆ ನೀಡುತ್ತಾರೆ. ಆದರೆ, ಸಲ್ಲುಗೆ ಈಗ ಮೊದಲು ಇದ್ದಷ್ಟು ಎನರ್ಜಿ ಇಲ್ಲ. ಅವರಿಗೆ ವಯಸ್ಸಾಗಿದ್ದು, ಎದ್ದೇಳಲು ಕಷ್ಟಪಟ್ಟಿದ್ದಾರೆ ಎಂದು ಅಭಿಮಾನಿಗಳು ಭಾವುಕರಾಗಿದ್ದಾರೆ.
ಅವರು ಇತ್ತೀಚೆಗೆ ಈವೆಂಟ್ ಒಂದರಲ್ಲಿ ಭಾಗಿ ಆಗಿದ್ದರು. ಈ ಈವೆಂಟ್ನಲ್ಲಿ ಸೋನಾಲಿ ಬೇಂದ್ರೆ ಅವರು ಆಗಮಿಸಿದರು. ಅವರನ್ನು ಭೇಟಿ ಮಾಡಲು ಎದ್ದರು. ಈ ವೇಳೆ ಎದ್ದೇಳಲು ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಲ್ಲು ಆರೋಗ್ಯದ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ. ಸಲ್ಲುಗೆ ವಯಸ್ಸಾಗಿದೆ ಎಂದು ಕೆಲವರು ಹೇಳಿದ್ದಾರೆ.
ಸಲ್ಮಾನ್ ಖಾನ್ ಅವರು ಸದ್ಯ ‘ಸಿಖಂದರ್’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

