ಬೆಂಗಳೂರು: ಸ್ಯಾಂಡಲ್ವುಡ್ ಡೈರೆಕ್ಟರ್ ನಾಗಶೇಖರ್ ಅವರ ಕಾರು ಮರಕ್ಕೆ ಡಿಕ್ಕಿಯಾಗಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಈ ಘಟನೆಯು ಸಿಲಿಕಾನ್ ಸಿಟಿಯ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದಿದೆ.
ನಿರ್ದೇಶಕ ನಾಗಶೇಖರ್ ಅವರು ಬೆಂಜ್ ಕಾರಿನಲ್ಲಿ ಹೋಗುವಾಗ ಮರಕ್ಕೆ ರಭಸವಾಗಿ ಡಿಕ್ಕಿಯಾಗಿದೆ. ಇದರ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ಜ್ಞಾನ ಭಾರತಿ ಕ್ಯಾಂಪಸ್ ಪೊಲೀಸರು ಭೇಟಿ ನೀಡಿದ್ದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
Ad