ಬಿಗ್ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಅವರ ಚೊಚ್ಚಲ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಇಂದ್ರಜಿತ್ ಲಂಕೇಶ್ ಆಕ್ಷನ್ ಕಟ್ ಹೇಳಿರೋ ಗೌರಿ ಸಿನಿಮಾವು ಇಂದು ಥಿಯೇಟರ್ಗೆ ಎಂಟ್ರಿ ಕೊಟ್ಟಿದೆ.
ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಅಯ್ಯರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಗೌರಿ’ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೈಲರ್ ಅನ್ನು ನಟ ಕಿಚ್ಚ ಸುದೀಪ್ ಅವರು ಸೋಮವಾರ ಬಿಡುಗಡೆ ಮಾಡಿದ್ದರು. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಗೌರಿ ಸಿನಿಮಾದ ಹಾಡುಗಳು ಭಾರಿ ಸದ್ದು ಮಾಡಿದ್ದವು.
ಸಮರ್ಜಿತ್ ಲಂಕೇಶ್ ಮತ್ತು ಸಾನ್ಯಾ ಅಯ್ಯರ್ ನಟನೆಯ ‘ಗೌರಿ’ ಸಿನಿಮಾದ ರೊಮ್ಯಾಂಟಿಕ್ ಹಾಡಿನ ಟೀಸರ್ ಮೈಸೂರಿನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು. ಟೀಸರ್ ಅನ್ನು ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಶ್ರೆಯಾಂಕಾ ಪಾಟೀಲ್ ಅವರು ಬಿಡುಗಡೆ ಮಾಡಿದ್ದರು.

