ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾದ ಸೆಟ್ನಲ್ಲಿ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ಸ್ಟಂಟ್ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ. ಎಝುಮಲೈ ಎಂಬ ಸ್ಟಂಟ್ಮ್ಯಾನ್ ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಣದ ವೇಳೆ 20 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಮಾಹಿತಿಗಳ ಪ್ರಕಾರ, ಸ್ಟಂಟ್ಮ್ಯಾನ್ ಎಝುಮಲೈ 20 ಅಡಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಎದೆಯ ಬಳಿ ತೀವ್ರವಾದ ಗಾಯವಾಗಿತ್ತು. ಶ್ವಾಸಕೋಶದಲ್ಲಿ ರಕ್ತಸ್ರಾವ ಉಂಟಾಗಿತ್ತು. ಪರಿಣಾಮ ಸ್ಟಂಟ್ ಮ್ಯಾನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೂಡಲೇ ಎಝುಮಲೈ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗದೆ ಸಾವನಪ್ಪಿದ್ದಾರೆ. ಎಸ್ ಜೆ ಸೂರ್ಯ ಪ್ರಮುಖ ಪಾತ್ರದಲ್ಲಿ ನಟಿಸಿತ್ತಿರುವ ಸರ್ದಾರ್ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ.

