ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದೀಕ್‌ ಇನ್ನಿಲ್ಲ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ದೀಕ್‌ ಇಂದು ರಾತ್ರಿ (ಆಗಸ್ಟ್‌ 8) 9ರ ಸುಮಾರಿಗೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಸಿದ್ದೀಕ್‌ ಅವರಿಗೆ ಸೋಮವಾರ ಹೃದಯಾಘಾತವಾಗಿದ್ದು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯ ಮೂಲಗಳ ಪ್ರಕಾರ, ಸಿದ್ದೀಕ್‌ ಅವರಿಗೆ ಎಕ್ಸ್‌ಟ್ರಾಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್ (ಇಸಿಎಂಒ) ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಮಲಯಾಳಂನ ‘ರಾಮ್​ಜಿ ರಾವ್​ ಸ್ಪೀಕಿಂಗ್​’, ‘ಇನ್​ ಹರಿಹರ್​ ನಗರ್​’, ‘ಗಾಡ್​ಫಾದರ್​’, ‘ವಿಯಾಟ್ನಾಂ ಕಾಲೋನಿ’, ‘ಕಾಬೂಲಿವಾಲಾ’ ಮುಂತಾದ ಸಿನಿಮಾಗಳಿಗೆ ಸಿದ್ದೀಕ್‌  ನಿರ್ದೇಶನ ಮಾಡಿದ್ದಾರೆ. ಸಿದ್ದೀಕ್‌ ಇಸ್ಮಾಯಿಲ್​ ಎಂಬುದು ಅವರ ಪೂರ್ಣ ಹೆಸರು. ನಿರ್ದೇಶನದ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅವರು ಅತಿಥಿ ಪಾತ್ರ ಮಾಡುವ ಮೂಲಕವೂ ಪ್ರೇಕ್ಷಕರಿಗೆ ಪರಿಚಿತರಾಗಿದ್ದರು.

Umesha HS

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

19 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

20 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

35 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

51 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

1 hour ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago