ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ (84) ಅವರು ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿಯ ಕೈಗಳನ್ನು ಹಿಡಿದು ಎಳೆದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಲೇ, ಜನರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಘವೇಂದ್ರ ರಾವ್ ಅವರಿಂದ ಪದೇ ಪದೇ ಇಂಥ ವರ್ತನೆ ಮರುಕಳಿಸುತ್ತಿದೆ.
ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್ ಅವರು ಇತ್ತೀಚೆಗೆ ನಡೆದ ಸಿನಿಮಾವೊಂದರ ಮುಹೂರ್ತದ ವೇಳೆ ಸ್ಟಾರ್ ನಟಿಯರಾದ ಕೀರ್ತಿ ಸುರೇಶ್ ಮತ್ತು ಕೃತಿ ಶೆಟ್ಟಿ ಅವರ ಕೈಗಳನ್ನು ಬಲವಂತವಾಗಿ ಹಿಡಿದು ಎಳೆದ ಘಟನೆ ನಡೆದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೊದಲು ಕೂಡ ಕೆ. ರಾಘವೇಂದ್ರ ರಾವ್ ಅವರು ಈ ರೀತಿಯ ವರ್ತನೆಯಿಂದ ಟ್ರೋಲ್ ಆಗಿದ್ದರು. ಈಗ ಮತ್ತೆ ಅದೇ ವರ್ತನೆ ಮುಂದುವರಿಸಿದ್ದಾರೆ.

