News Karnataka Kannada
Wednesday, April 17 2024
Cricket
ಮನರಂಜನೆ

ಆರ್‌ ಆರ್‌ ಆರ್ ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ರ ಪತ್ನಿ ನಿಧನ

ಭಾರತಕ್ಕೆ ಆಸ್ಕರ್ ತಂದು ಕೊಟ್ಟ ಹಾಗೂ ವಿಶ್ವ ಮಟ್ಟದಲ್ಲಿ ಸಖತ್ ಸುದ್ದಿ ಮಾಡಿದ್ದ ರಾಜಮೌಳಿ ನಿರ್ದೇಶನದ RRR ಸಿನಿಮಾದ ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ. ಯೋಗ ಕೋಚ್ ಕೂಡ ಆಗಿದ್ದ ಅವರ ಪತ್ನಿ ರೂಹಿ ಅನಾರೋಗ್ಯದಿಂದಾಗಿ ಒಳಲುತ್ತಿದ್ದರು. ಹೀಗಾಗಿ ಅವರನ್ನು ಸಿಖಂದರಾಬಾದ್​ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.
Photo Credit : News Kannada

ಪತಿಯಂತಯೇ ರೂಹಿ ಕೂಡ ತಮ್ಮ ಕ್ಷೇತ್ರದಲ್ಲಿ ಹೆಸರನ್ನು ಮಾಡಿದ್ದರು. ಆದರೆ, ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಕೆಲವು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಲೇ ಇದ್ದರು.

2019ರಲ್ಲಿ ರೂಹಿಗೆ ಕೋವಿಡ್ ಸೋಂಕು ತಗುಲಿತ್ತು. ಅಲ್ಲಿಂದ ರೂಹಿ ಅವರ ಆರೋಗ್ಯ ಹದಗೆಡುತ್ತಾ ಬಂದಿತ್ತು. ಆಗಾಗ ಆರೋಗ್ಯ ಕೆಡುತ್ತಲೇ ಇತ್ತು. ಇತ್ತೀಚೆಗೆ ರೂಹಿ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಸಿಖಂದರಬಾದ್‌ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈ ಬಾರಿ ಚಿಕಿತ್ಸೆ ಫಲಿಸದೆ ಕೊನೆಯುಸಿರು ಎಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು