News Karnataka Kannada
Sunday, April 28 2024
ಮನರಂಜನೆ

ಗೂಗಲ್​ ಹುಡುಕಾಟದಲ್ಲಿ ನಂಬರ್​ ಒನ್​ ಸ್ಥಾನ ಪಡೆದುಕೊಂಡ ಶಾರುಖ್​ ಖಾನ್

Shah Rukh Khan tops google search list
Photo Credit : News Kannada

ಮುಂಬೈ : ನಟ ಶಾರುಖ್​ ಖಾನ್​ ಅಭಿನಯದ ‘ಜವಾನ್​’, ‘ಪಠಾಣ್​’ ಸಿನಿಮಾಗಳು ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಗಳಿಸಿವೆ. ಗಲ್ಲಾಪೆಟ್ಟಿಗೆ ಗಳಿಕೆ ಮಾತ್ರವಲ್ಲದೇ ಗೂಗಲ್​ ಹುಡುಕಾಟದಲ್ಲೂ  ಶಾರುಖ್​ ಖಾನ್​ ನಂಬರ್​ ಒನ್​ ಸ್ಥಾನ ಪಡೆದುಕೊಂಡಿದ್ದಾರೆ.

2023ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳ ಪಟ್ಟಿಯನ್ನು ಗೂಗಲ್​ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್​ ಖಾನ್​ ನಟನೆಯ ಜವಾನ್​ ಸಿನಿಮಾಗೆ ನಂಬರ್​ 1 ಸ್ಥಾನ ಸಿಕ್ಕಿದೆ.

2023ರಲ್ಲಿ ಸೂಪರ್​ ಹಿಟ್​ ಆದ ಮತ್ತೊಂದು ಸಿನಿಮಾ ‘ಗದರ್​ 2’ ಎರಡನೇ ಸ್ಥಾನ ಪಡೆದುಕೊಂಡಿದೆ. ಭಾರಿ ಚರ್ಚೆ ಹುಟ್ಟುಹಾಕಿದ್ದ ಕ್ರಿಸ್ಟೋಫರ್​ ನೋಲನ್​ ನಿರ್ದೇಶನದ ‘ಆಪನ್​ಹೈಮರ್​’ ಸಿನಿಮಾಗೆ 3ನೇ ಸ್ಥಾನ ಸಿಕ್ಕಿದೆ. 4ನೇ ಸ್ಥಾನದಲ್ಲಿ ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ ಇದೆ. 5ನೇ ಸ್ಥಾನದಲ್ಲಿ ‘ಪಠಾಣ್​’, 6ನೇ ಸ್ಥಾನದಲ್ಲಿ ‘ದಿ ಕೇರಳ ಸ್ಟೋರಿ’, 7ನೇ ಸ್ಥಾನದಲ್ಲಿ ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಇದೆ.

8ನೇ ಸ್ಥಾನದಲ್ಲಿ ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾ ಇದೆ. ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ 3’ ಸಿನಿಮಾ 9ನೇ ಸ್ಥಾನದಲ್ಲಿದೆ. 10ನೇ ಸ್ಥಾನದಲ್ಲಿ ‘ವಾರಿಸು’ ಸಿನಿಮಾ ಇದೆ.

ಈ ‘ಟಾಪ್​ 10’ ಪಟ್ಟಿಯಲ್ಲಿ ಕನ್ನಡದ ಯಾವುದೇ ಸಿನಿಮಾಗಳೂ ಕೂಡ ಸ್ಥಾನ ಪಡೆದುಕೊಂಡಿಲ್ಲ ಎಂಬುದು ಬೇಸರದ ಸಂಗತಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು