Ad

ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ವಿನಮ್ರ ಶಿವಣ್ಣ ಮನವಿ

Shivanna

ಬೆಂಗಳೂರು: ಶಿವರಾಜ್ ಕುಮಾರ್ ಹುಟ್ಟುವೆಂದರೆ ಅಭಿಮಾನಿಗಳಿಗೆ ಹಬ್ಬ. ಬಹುತೇಕ ಪ್ರತಿವರ್ಷವೂ ಅಭಿಮಾನಿಗಳು ಶಿವರಾಜ್ ಕುಮಾರ್ ನಿವಾಸದ ಮುಂದೆ ನೆರೆದು ಅವರೊಟ್ಟಿಗೆ ಕೇಕ್ ಕತ್ತರಿಸಿ, ಹಾರ ಹಾಕಿ, ಘೋಷಣೆಗಳನ್ನು ಕೂಗಿ ಸಂಭ್ರಮದಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ.

Ad
300x250 2

ಈ ಬಾರಿಯೂ ಸಹ ಅದೇ ಯೋಜನೆಯಲ್ಲಿ ಅಭಿಮಾನಿಗಳಿದ್ದರು. ಆದರೆ ಶಿವರಾಜ್ ಕುಮಾರ್ ನಿರ್ಣಯವೊಂದನ್ನು ಮಾಡಿದ್ದು, ತಾವು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಟ್ಟಿಗೆ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ. ಅದಕ್ಕಾಗಿ ಕ್ಷಮೆಯನ್ನೂ ಸಹ ಕೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಿವರಾಜ್ ಕುಮಾರ್, ‘ಅಭಿಮಾನಿ ದೇವರುಗಳಿಗೆ, ಪ್ರತಿ ವರ್ಷ ನನ್ನ ಹುಟ್ಟುಹಬ್ಬ ದೊಡ್ಡ ಹಬ್ಬ ಆಗೋದು ನಿಮ್ಮ ಜೊತೆ ಕಳೆದಾಗ. ನೀವು ಅಕ್ಕರೆಯಿಂದ ಕೊಡೋ ಹಸ್ತಲಾಘವ, ಪ್ರೀತಿಯ ಅಪ್ಪುಗೆ, ನೀಡೋ ಆಶೀರ್ವಾದ ನಿಮ್ಮ ಶಿವುಗೆ ಶ್ರೀರಕ್ಷೆ. ಈ ವರ್ಷ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರೋದಕ್ಕೆ ಆಗುವುದಿಲ್ಲ, ಆದರೆ ವರ್ಷವಿಡೀ ಒಟ್ಟಿಗೆ ಪ್ರತಿ ದಿನ ಸೆಲೆಬ್ರೇಟ್ ಮಾಡೋಣ. ನಾನು ಹುಟ್ಟುಹಬ್ಬಕ್ಕೆ ಇಲ್ಲದೆ ಇದ್ರೂ ನಿಮ್ಮ ಜೊತೆ ಭೈರತಿ ರಣಗಲ್ ಇರ್ತಾನೆ, ಜುಲೈ 12 ರಂದು ಬೆಳಿಗ್ಗೆ 10:10 ಕ್ಕೆ, ನಿಮ್ಮ ಆಶೀರ್ವಾದ ಸದಾ ಇರಲಿ’ ಎಂದಿದ್ದಾರೆ ಶಿವಣ್ಣ.

ಶಿವರಾಜ್‌ಕುಮಾರ್‌ ಅವರು ಈ ಬಾರಿ ಜನದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದರೂ, ನಾಳೆ ಶಿವರಾಜ್‌ಕುಮಾರ್‌ ಅವರು ನಟಿಸಿರುವ ಸಿನಿಮಾಗಳ ಫಸ್ಟ್‌ ಲುಕ್‌ , ಟೀಸರ್‌, ಹೊಸ ಸಿನಿಮಾಗಳ ಘೋಷಣೆ ಆಗುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಷಯ ಸಿಗಲಿದೆ.

Ad
Ad
Nk Channel Final 21 09 2023
Ad