ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್’ ಚಿತ್ರವು, ಸೋಮವಾರ ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್ ನಂದಿ ವಿಗ್ರಹದ ಸನ್ನಿಧಿಯಲ್ಲಿ ಸೆಟ್ಟೇರಿದೆ.

ಶಿವರಾಜ್‍ಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರದ ಚಿತ್ರೀಕರಣವೂ ಇದೇ ನಂದಿ ದೇವಸ್ಥಾನದಲ್ಲಿ ಪ್ರಾರಂಭವಾಗಿತ್ತು. ಈಗ 32 ವರ್ಷಗಳ ನಂತರ ‘ಡ್ಯಾಡ್’ ಚಿತ್ರ ಅಲ್ಲಿ ಮುಹೂರ್ತವಾಚರಿಸಿಕೊಂಡಿದೆ.
ಚಿತ್ರದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜ್‍ಕುಮಾರ್ ಫಲಕ ತೋರಿ ಚಿತ್ರತಂಡಕ್ಕೆ ಶುಭಕೋರಿದರು. ಮೈರಾ ಕ್ರಿಯೇಷನ್ಸ್ ಲಾಂಛನದಡಿ ಹರೀಶ್ ಪೆದ್ದಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನಿಲ್ ಕನ್ನೆಗಂಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.ಇದೊಂದು ಥ್ರಿಲ್ಲರ್ ಚಿತ್ರವಾಗಿದ್ದು,

ಶಿವರಾಜ್‍ಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ.

