Categories: ಮನರಂಜನೆ

ಹೆದ್ದಾರಿಯಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಕಾರು ಅಪಘಾತ

ಹೈದರಾಬಾದ್:  ರಾಬರ್ಟ್​ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ.

ಗಾಯಕಿ ಮಂಗ್ಳಿ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಹಿಂತಿರುಗುವ ವೇಳೆ ಅವರ ಕಾರು ಅಪಘಾತವಾಗಿದೆ. ಶಂಶಾಬಾದ್​ ತೊಂಡುಪಲ್ಲಿ ಬಳಿಕ ಟ್ರಕ್​ವೊಂದು ಅವರ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಮಂಗ್ಳಿ, ಮೇಘರಾಜ್​, ಮನೋಹರ್​ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಇನ್ನು ಟ್ರಕ್​ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಎಂದು ಸದ್ಯ ತಿಳಿದು ಬಂದಿದೆ.

 

Ashitha S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago