Bengaluru 23°C
Ad

ಕಮಲ್‌ ಹಾಸನ್‌ ನಟನೆಯ ʻಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌

ಉಳಗ ನಾಯಕನ್‌ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಪ್ಯಾನ್‌ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಚೆನ್ನೈ: ಉಳಗ ನಾಯಕನ್‌ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಪ್ಯಾನ್‌ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ʼಇಂಡಿಯನ್ 2ʼ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ಇಂಡಿಯನ್ 2ʼ ಸಿನಿಮಾದ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ. ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ. ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,‌ ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.

Ad
Ad
Nk Channel Final 21 09 2023
Ad