Bengaluru 24°C
Ad

ದರ್ಶನ್ ಅಭಿಮಾನಿಗಳಿಂದ ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ

ದರ್ಶನ್ ಅಭಿಮಾನಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ  ಎಂದು ನಟಿ ಸೋನು ಶ್ರೀನಿವಾಸ್ ಗೌಡ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

ದರ್ಶನ್ ಅಭಿಮಾನಿಗಳು ನನಗೆ ಕಿರುಕುಳ ನೀಡುತ್ತಿದ್ದಾರೆ  ಎಂದು ನಟಿ ಸೋನು ಶ್ರೀನಿವಾಸ್ ಗೌಡ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್‌ ಆಗಿದ್ದು, ಅವರ ಪರ ಸೋನು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸೋನು ಅಶ್ಲೀಲ ಕಾಮೆಂಟ್‌ಗಳಿಂದ ಕಿರುಕುಳ ಕೊಡುತ್ತಿದ್ದಾರೆ ಎಂದು ನಟಿ ತಿಳಿಸಿದ್ದಾರೆ.

ಸೋನು ಗೌಡ ಮಾತನಾಡಿ, ಇನ್ಸ್ಟಾಗ್ರಾಂ, ಯುಟ್ಯೂಬ್‌ನಲ್ಲಿ ತುಂಬಾ ಕೆಟ್ಟ ಕಾಮೆಂಟ್‌ಗಳು ನನಗೆ ಬರುತ್ತಿವೆ. ದರ್ಶನ್ ಅವರ ಬಗ್ಗೆ ನಾನು ಏನು ಮಾತನಾಡಿಲ್ಲ ಎಂದು. ನಾವು ಇನ್ನೂ ಚಿಕ್ಕವರು. ನಾವು ಅವರ ಬಗ್ಗೆ ಮಾತನಾಡುವಷ್ಟು ಇನ್ನೂ ಬೆಳೆದಿಲ್ಲ.

ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಆಗಿಯೇ ಆಗುತ್ತೆ. ನಾವು ಒಳ್ಳೆಯವರಾಗಿರಬಹುದು, ಕೆಟ್ಟವರಾಗಿರಬಹುದು ಆದರೆ ತೀರ್ಪು ಬಂದೇ ಬರುತ್ತದೆ. ಅಲ್ಲಿಯವರೆಗೂ ಕಾಯಿರಿ. ಅಲ್ಲಿಯವರೆಗೆ ನಮಗೆ ಕೆಟ್ಟ ಕಾಮೆಂಟ್ ಮಾಡಬೇಡಿ.

ಅಲ್ಲಿಯವರೆಗೆ ಆ ದೇವರು ಎರಡೂ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ. ನಮ್ಮ ಬಾಸ್ ದರ್ಶನ್ ಅವರು ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೋಪ್ ಇಟ್ಟುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

 

 

 

Ad
Ad
Nk Channel Final 21 09 2023
Ad