Bengaluru 27°C

ಸ್ಪಂದನಾ ಅಗಲಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

Vijay

ಬೆಂಗಳೂರು: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.


ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.


ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.


ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.


https://www.instagram.com/p/C-UE2PAvucD/


 

Nk Channel Final 21 09 2023