ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ವೈರಲ್ ಗೆ ಕುಟುಂಬಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ. ಈ ರೀತಿಯಾಗಿ ವದಂತಿ ಹಬ್ಬಿಸುವುದು ಸಲ್ಲದು ಎಂದಿದ್ದಾರೆ.
ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ.ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ ಮಾಡಲಾಗಿದೆ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳಿಂದ ಮಾಹಿತಿ ಲಭಿಸಿದೆ.
ನಟನ ಅಭಿಮಾನಿಗಳು ಕೂಡಾ ಈ ಬಗ್ಗೆ ತೀವ್ರ ಬೇಸರ ವ್ಯಕ್ತ ಪಡಿಸಿದ್ದಾರೆ. ಈ ಕೆಲಸ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

