‘ಸ್ತ್ರೀ 2’ ಸಿನಿಮಾ ಪ್ರೇಕ್ಷಕರ ಬಹುನಿರೀಕ್ಷಿತ ಚಿತ್ರವಾಗಿತ್ತು. ರಾಜ್ಕುಮಾರ್ ರಾವ್ ಶ್ರದ್ಧಾಕಪೂರ್ ನಟನೆಯ ‘ಸ್ತ್ರೀ 2’ ಸಿನಿಮಾ ಗೆಲ್ಲುತ್ತದೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ ಸ್ಟಾರ್ ನಟರ ಸಿನಿಮಾಗಳನ್ನೂ ಮೀರಿಸುವ ರೀತಿಯಲ್ಲಿ ಕಲೆಕ್ಷನ್ ಮಾಡಲಿದೆ ಎಂದು ಬಹುತೇಕರು ಊಹಿಸಿರಲಿಲ್ಲ. ‘ಸ್ತ್ರೀ 2’ ಸಿನಿಮಾ ಬಿಡುಗಡೆಯಾಗಿ 12 ದಿನ ಕಳೆದಿದೆ. ಈ ಚಿತ್ರಕ್ಕೆ ವಿಶ್ವಾದ್ಯಂತ ಬರೋಬ್ಬರಿ 560 ಕೋಟಿ ರೂಪಾಯಿ ಕಮಾಯಿ ಆಗಿದೆ. ‘ಸ್ತ್ರೀ ಚಿತ್ರದ ಮೊದಲ ಪಾರ್ಟ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು ಹಾಗಾಗಿ ಹೆಚ್ಚಿನ ನಿರೀಕ್ಷೆ ಹೊಂದಿದ್ದ ಸ್ತ್ರೀ 2 ಇದೀಗ ಭರ್ಜರಿ ಭೇಟೆಯಾಡುತ್ತಿದೆ.
‘ಸ್ತ್ರೀ 2’ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರಿಗೆ ಪ್ರಮುಖ ಪಾತ್ರವಿದೆ. ಹಾಗೆಯೇ ರಾಜ್ಕುಮಾರ್ ರಾವ್, ಪಂಕಜ್ ತ್ರಿಪಾಠಿ, ಅಭಿಷೇಕ್ ಬ್ಯಾನರ್ಜಿ ಮುಂತಾದವರು ನಟಿಸಿದ್ದಾರೆ. ತಮನ್ನಾ ಭಾಟಿಯಾ, ವರುಣ್ ಧವನ್ ಅವರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಲ್ಲ ಕಲಾವಿದರಿಂದಾಗಿ ಸಿನಿಮಾದ ಮೆರುಗು ಹೆಚ್ಚಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಸಖತ್ ಇಷ್ಟಪಟ್ಟಿದ್ದಾರೆ.
ಭಾರತದ ಬಾಕ್ಸ್ ಆಫೀಸ್ನಲ್ಲಿ ಮೊದಲ ದಿನ (ಆಗಸ್ಟ್ 15) ‘ಸ್ತ್ರೀ 2’ ಸಿನಿಮಾಗೆ ಬರೋಬ್ಬರಿ 55.40 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಇದು ಸಣ್ಣ ಮೊತ್ತವಲ್ಲ. ಪ್ರತಿ ದಿನವೂ ಈ ಸಿನಿಮಾ ಉತ್ತಮವಾಗಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗಿತು. ರಿಲೀಸ್ಗೂ ಮುನ್ನ ಪೇಯ್ಡ್ ಪ್ರೀಮಿಯರ್ ಮಾಡಿದ್ದಾಗಲೇ 9.40 ಕೋಟಿ ರೂಪಾಯಿ ಆದಾಯ ಬಂದಿತ್ತು. ಭಾರತದಲ್ಲಿ 11 ದಿನಗಳಿಗೆ ಈ ಸಿನಿಮಾದ ಒಟ್ಟು ಕಲೆಕ್ಷನ್ 402 ಕೋಟಿ ರೂಪಾಯಿ ಆಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

