ಮಂಗಳೂರು: ‘ಸು ಫ್ರಮ್ ಸೋ’ ಚಿತ್ರವನ್ನು ನಿರ್ದೇಶಕ, ನಟ ಜೆ.ಪಿ.ತುಮಿನಾಡ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಪಿಲಿಕುಲದಲ್ಲಿರುವ ಸ್ಕೌಟ್ ಭವನದಲ್ಲಿ ರಶ್ಮಿಕಾ ಅವರೊಂದಿಗೆ ಜೆ.ಪಿ.ತುಮಿನಾಡ್ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

ನಿರೂಪಕ ನಿರಂಜನ್ ದೇಶಪಾಂಡೆ, ನಟಿ ಸಂಧ್ಯಾ ಅರಕೆರೆ, ನಿರ್ದೇಶಕ ಶ್ರೀನಿಧಿ ಸೇರಿದಂತೆ ಅನೇಕರು ವಿವಾಹ ಸಂಭ್ರಮದಲ್ಲಿ ಭಾಗಿಯಾಗಿ ನವ ದಂಪತಿಗೆ ಶುಭ ಹಾರೈಸಿದ್ದಾರೆ.