ತುಮಕೂರು: ಕಿಚ್ಚ ಸುದೀಪ್ ಅವರು ಹೀರೋ ಆಗಿ ಗಮನ ಸೆಳೆದಿದ್ದಾರೆ. ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಇದರ ಜೊತೆಗೆ ಅವರು ಸಾಕಷ್ಟು ಸಮಾಜಮುಖಿ ಕೆಲಸವನ್ನು ಕೂಡ ಮಾಡುತ್ತಿದ್ದಾರೆ. ಸುದೀಪ್ ಅವರ ಒಳ್ಳೆಯ ಕೆಲಸವನ್ನು ಗಮನಿಸಿ ತುಮಕೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ, ಇದನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಮಾದರಿ ನಡೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಕಿಚ್ಚ ಸುದೀಪ್ಗೆ ಗೌರವ ಡಾಕ್ಟರೇಟ್ ನೀಡಲು ತುಮಕೂರು ವಿವಿ ನಿರ್ಧರಿಸಿತ್ತು. ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್ ಗಮನಕ್ಕೆ ತರಲಾಗಿತ್ತು. ವಿವಿ ನಿರ್ಧಾರಕ್ಕೆ ಹೃದಯಪೂರ್ವಕ ಧನ್ಯವಾದ ತಿಳಿಸಿರುವ ಸುದೀಪ್ ಅವರು, ಇದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ‘ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಹಿರಿಯರು ಇದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿ’ ಎಂದು ಸುದೀಪ್ ಕೋರಿದ್ದಾರೆ.
ಆಗಸ್ಟ್ 17ರಂದು ತುಮಕೂರು ವಿವಿ ಆವರಣದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ನಡೆಯಲಿದೆ. ಈ ಬಾರಿ ತುಮಕೂರು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಜಲಕ್ರೀಡಾ ಸಾಹಸಿಗ ಮತ್ತು ಸಾಮಾಜಿಕ ಕಾರ್ಯಕರ್ತ ಸಿ.ಎಸ್. ನಾಗಾನಂದನ ಸ್ವಾಮಿ, ಕೈಗಾರಿಕೋದ್ಯಮಿ ಎಚ್. ಜಿ.ಚಂದ್ರಶೇಖರ್, ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

