ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್, ಜಾಕ್ವೆಲಿನ್ ಫರ್ನಾಂಡಿಸ್ ಗೆ ಬೆದರಿಕೆಯ ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿದ್ದಾರೆ.
ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ.
ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನುವುದೇ ದೊಡ್ಡ ಕಾರಣ ಎಂದು ತಿಳಿದು ಬಂದಿದೆ.
ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.