Ad

ತಮಿಳು ನಟ ಬಿಜಿಲಿ ರಮೇಶ್ ಅವರು ಅನಾರೋಗ್ಯದಿಂದ ನಿಧನ!

ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.‌

ಅವರು ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದ ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಆರ್ಥಿಕವಾಗಿಯೂ ನಟ ಸಂಕಷ್ಟದಲ್ಲಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023