ತಮಿಳು

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ ನಟ ಕಮಲ್​ ಹಾಸನ್​

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು.ಕೊವಿಡ್​ ನಿಧಾನವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲೇ ನಟ ಕಮಲ್​ ಹಾಸನ್​ಗೆ ಕೊವಿಡ್​ ಅಂಟಿದ್ದು ಸಾಕಷ್ಟು ಆತಂಕ ಮೂಡಿಸಿತ್ತು.

ಕಮಲ್​ ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಕೋರಿಕೊಂಡಿದ್ದರು. ಈ ಪ್ರಾರ್ಥನೆ ಈಗ ಸಫಲವಾಗಿದೆ. ನಟ ಕಮಲ್​ ಹಾಸನ್​ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕಮಲ್​ ಹಾಸನ್​ ಅಮೆರಿಕಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮರಳಿದ ಮೇಲೆ ಸಣ್ಣ ಪ್ರಮಾಣದ ಕೊವಿಡ್​ ಲಕ್ಷಣಗಳು ಅವರಿಗೆ ಕಾಣಿಸಿಕೊಂಡಿತ್ತು. ಹೀಗಾಗಿ, ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿದ್ದರು ​. ಈ ವೇಳೆ ಕೊರೊನಾ ಪಾಸಿಟಿವ್ ಆಗಿರುವುದು ಖಚಿತಗೊಂಡಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯ ಈಗ ಸಂಪೂರ್ಣವಾಗಿ ಸುಧಾರಿಸಿದೆ.

ಕೊವಿಡ್​ ಅಂಟಿದ ನಂತರದಲ್ಲಿ ಕೆಲ ದಿನಗಳ ಕಾಲ ಸುಸ್ತು ಇರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಕಮಲ್​ಗೆ ಈಗ 67ನೇ ವರ್ಷ. ಹೀಗಾಗಿ, ಕೊವಿಡ್​ ಕಾಣಸಿಕೊಂಡ ನಂತರ ಅವರು ವಿಶ್ರಾಂತಿ ಪಡೆಯಲೇಬೇಕು. ಹೀಗಾಗಿ, ಕಡ್ಡಾಯವಾಗಿ ಕೆಲ ದಿನಗಳ ಕಾಲ ಮನೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಪಾಲ್ಗೊಳ್ಳದೆ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿದ್ದ ಕಮಲ್​ ‘ಅಮೆರಿಕದಿಂದ ವಾಪಸ್ ಬಂದ ಬಳಿಕ ನನಗೆ ಸಣ್ಣದಾಗಿ ಕೆಮ್ಮು ಆರಂಭವಾಗಿತ್ತು. ಪರೀಕ್ಷೆ ಮಾಡಿಸಿದ ನಂತರ ಇದು ಕೋವಿಡ್-19 ಪಾಸಿಟಿವ್ ಎಂಬುದು ತಿಳಿದುಬಂತು. ನಾನೀಗ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿದ್ದೇನೆ. ಒಂದು ಅರಿವಾಗಿದ್ದೇನೆಂದರೆ, ಈ ಮಹಾಮಾರಿ ನಮ್ಮನ್ನು ಬಿಟ್ಟು ಇನ್ನೂ ಹೋಗಿಲ್ಲ. ನಾವೆಲ್ಲ ಸುರಕ್ಷಿತವಾಗಿ ಇರಬೇಕಿದೆ’ ಎಂದಿದ್ದರು ಕಮಲ್​.

Gayathri SG

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

11 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

44 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago