ತಮಿಳು

ಐದು ದಿನಗಳಲ್ಲಿ 150 ಕೋಟಿ ರೂಪಾಯಿ ದಾಟಿದ ‘ಅಣ್ಣಾಥೆ’

ಕರ್ನಾಟಕ ಹಾಗೂ ಆಂಧ್ರ ಸಹಿತ ವಿವಿಧ ರಾಜ್ಯಗಳಲ್ಲಿ ‘ಅಣ್ಣಾಥೆ’ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಿದ್ದು, ಮೊದಲ ದಿನವೇ ಅದ್ಭುತ ಗಳಿಕೆ ಮಾಡಿದೆ. ಈ ಚಿತ್ರದ ಗಳಿಕೆ ಐದು ದಿನಗಳಲ್ಲಿ 150 ಕೋಟಿ ರೂಪಾಯಿ ದಾಟಿದೆ.ಶೀಘ್ರದಲ್ಲೇ ಸಿನಿಮಾ 200 ಕೋಟಿ ಕ್ಲಬ್​ ಸೇರುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದೆ. ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದಾಗ್ಯೂ ಜನರು ಸಿನಿಮಾ ನೋಡೋಕೆ ತೆರಳುತ್ತಿದ್ದಾರೆ. ‘ಅಣ್ಣಾಥೆ’ ಅಭಿಮಾನಿಗಳ ಪಾಲಿಗೆ ಪರ್ಫೆಕ್ಟ್​ ದೀಪಾವಳಿ ಉಡುಗೊರೆ ಆಗಿದೆ.

‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ.

ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಿದೆ. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ನವೆಂಬರ್​​ 5ರಂದು ಸಿನಿಮಾ 42.6 ಕೋಟಿ ರೂಪಾಯಿ, ನವೆಂಬರ್​ 6ರಂದು ಚಿತ್ರ 33.71 ಕೋಟಿ ಗಳಿಸಿದೆ.

ಭಾನುವಾರ ಸಿನಿಮಾ ಗಳಿಕೆ 28.20 ಕೋಟಿ ಹಾಗೂ ಸೋಮವಾರ 11.85 ಕೋಟಿ ಬಾಚಿಕೊಂಡಿದೆ. ಈ ಮೂಲಕ ಸಿನಿಮಾ ಕಲೆಕ್ಷನ್​ 186.58 ಕೋಟಿ ರೂಪಾಯಿ ಆಗಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬಂದಿದೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago