Categories: ತಮಿಳು

ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ರಜನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ

ಚೆನ್ನೈ : ಮಿದುಳಿನ ರಕ್ತ ಸಂಚಾರ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ನಡೆಸಲಾದ ಶಸ್ತ್ರಚಿಕಿತ್ಸೆಯಿಂದ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಳ್ಳುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಇಂದು ರಜನಿಕಾಂತ್‌ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿರುವುದಾಗಿ ವರದಿಯಾಗಿದೆ.

ಇಲ್ಲಿನ ಕಾವೇರಿ ಆಸ್ಪತ್ರೆಯಲ್ಲಿ ರಜನಿಕಾಂತ್‌ (70) ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳುವ ಸಾಧ್ಯತೆಯಿದೆ. ಅಕ್ಟೋಬರ್‌ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಭಾನುವಾರ ಮುಖ್ಯಮಂತ್ರಿ ಸ್ಟಾಲಿನ್‌ ಅವರು ರಜನಿಕಾಂತ್‌ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ. ಆಸ್ಪತ್ರೆಯಿಂದ ಸ್ಟಾಲಿನ್‌ ಅವರು ಕಾರಿನಲ್ಲಿ ಹೊರ ಹೋಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ತಲೆ ಸುತ್ತಿದಂತಾದ ಅನುಭವವಾದ ಕಾರಣದಿಂದ ರಜನಿಕಾಂತ್‌ ಅವರು ಆಸ್ಪತ್ರೆಗೆ ದಾಖಲಾದರು. ತಜ್ಞ ವೈದ್ಯರ ತಂಡವು ಅವರ ಆರೋಗ್ಯ ತಪಾಸಣೆ ನಡೆಸಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆಯು ಯಶಸ್ವಿಯಾಗಿದೆ, ಅವರು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಶುಕ್ರವಾರ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಸೋಮವಾರ ದೆಹಲಿಯಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್‌ ಅವರಿಗೆ 51ನೇ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ರಜನಿಕಾಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರನ್ನು ಭೇಟಿಯಾಗಿದ್ದರು.

ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಸಿನಿಮಾದ ಟ್ರೈಲರ್‌ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ನವೆಂಬರ್ 4 ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

2020ರ ಡಿಸೆಂಬರ್‌ನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಜನಿಕಾಂತ್‌ ಅವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾದ ಕಾರಣ ಹೈದರಾಬಾದ್‌ನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಎರಡು ದಿನಗಳ ಚಿಕಿತ್ಸೆ ನಂತರ ಗುಣಮುಖರಾಗಿದ್ದರು. ಹಿಂದೆ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆದಿದೆ.

Gayathri SG

Recent Posts

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

4 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

8 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

18 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

49 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

2 hours ago