ಚೆನ್ನೈ ; ಸಿನಿಮಾ ಶೂಟಿಂಗ್ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ತೆರಳುತ್ತಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ದಕ್ಷಿಣ ಭಾರತದ ಬಹುಭಾಷಾ ನಟ ಎಂದೇ ಖ್ಯಾತರಾಗಿರುವ ಪ್ರಕಾಶ್ ರಾಜ್, ತಮಿಳು ಸೂಪರ್ ಸ್ಟಾರ್ ಧನುಷ್ ನಟನೆಯ 44ನೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶೂಟಿಂಗ್ ವೇಳೆ ಒಂದು ಸಣ್ಣ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಚೆನ್ನಾಗಿದ್ದೇನೆ, ಯಾರೂ ಚಿಂತೆ ಮಾಡಬೇಡಿ ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.