ಚೆನ್ನೈ,ಜು.19: ಖ್ಯಾತ ಚಲನಚಿತ್ರ ನಿರ್ಮಾಪಕ ಮಣಿರತ್ನಂಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರು ಚೆನ್ನೈ ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವೈದ್ಯಕೀಯ ಪರೀಕ್ಷೆಯ ಸಂದರ್ಭದಲ್ಲಿ ಮಣಿರತ್ನಂಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದೆ.
ತಮಿಳಿನ ಕಾದಂಬರಿ ಆಧಾರಿತ ಪೊನ್ನಿಯಿನ್ ಸೆಲ್ವನ್ ಚಿತ್ರ ನಿರ್ಮಾಣವು ಮಣಿರತ್ನಂ ಕನಸಿನ ಕೂಸಾಗಿದ್ದು, ಈ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಮೊದಲ ಭಾಗವು ಬಹು ಭಾಷೆಗಳಲ್ಲಿ ಸೆಪ್ಟೆಂಬರ್ 30ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.