Categories: ತಮಿಳು

ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ : ಮಾಲೀಕನ ಬಂಧನ

ಚೆನ್ನೈ: ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಗಿಳಿಮರಿ ಕೈಯಲ್ಲಿ ಭವಿಷ್ಯ ಹೇಳಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಪಿಎಂಕೆ ಪಕ್ಷದಿಂದ ಥಂಕರ್ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ಇವರು ಬೀದಿ ಬದಿಯಲ್ಲಿ ಗಿಳಿ ಶಾಸ್ತ್ರ ಕೇಳಿದ್ದರು. ಸೆಲ್ವರಾಜ್ ಎಂಬುವವರು ಗಿಳಿ ಕೈಯಲ್ಲಿ ಭವಿಷ್ಯ ಹೇಳಿಸಿ ಥಂಕರ್ ಬಚ್ಚನ್‌ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದಿದೆ.

ಪಿಎಂಕೆ ಪಕ್ಷದ ಥಂಕರ್ ಬಚ್ಚನ್ ಗಿಳಿ ಶಾಸ್ತ್ರ ಗೆಲ್ಲುತ್ತೇನೆ ಅನ್ನೋ ಭವಿಷ್ಯ ಕೇಳಿ ತುಂಬಾ ಖುಷಿಯಾದರು. ಗಿಳಿ ಮರಿಗೆ ಒಂದು ಬಾಳೆಹಣ್ಣನ್ನು ಕೊಟ್ಟು ಹೋಗಿದ್ದಾರೆ. ಸೆಲ್ವರಾಜ್ ಅವರು ಗಿಳಿಮರಿಯನ್ನು ಪಂಜರದಲ್ಲಿಟ್ಟು ಗಿಳಿ ಶಾಸ್ತ್ರ ಹೇಳುತ್ತಾ ಜೀವನ ನಡೆಸುತ್ತಿದ್ದಾರೆ. ಇದೀಗ ಚುನಾವಣೆಯ ಸಮಯದಲ್ಲಿ ಭವಿಷ್ಯ ಹೇಳಿ ಆಪತ್ತಿಗೆ ಸಿಲುಕಿದ್ದಾರೆ. ಸೆಲ್ವರಾಜ್ ಜೊತೆಗಿದ್ದ ಆತನ ಸಹೋದರನನ್ನು ಬಂಧಿಸಲಾಗಿದೆ.

1972ರ ವನ್ಯಜೀವಿ ಸಂರಕ್ಷಣಾ ಕಾಯಿದೆ ಪ್ರಕಾರ ಪಕ್ಷಿಯನ್ನು ಪಂಜರದಲ್ಲಿಟ್ಟು ಬಳಸಿಕೊಳ್ಳುವಂತಿಲ್ಲ. ಈ ಕಾಯ್ದೆ ಉಲ್ಲಂಘಿಸಿದ ಆರೋಪದಲ್ಲಿ ಹಾಗೂ ಅಕ್ರಮವಾಗಿ ವನ್ಯಜೀವಿಯನ್ನು ಬಳಕೆ ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡು ಅರಣ್ಯ ವಿಭಾಗದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗಿಳಿ ಶಾಸ್ತ್ರ ಹೇಳಿದ ಸೆಲ್ವರಾಜ್ ಅವರನ್ನು ಬಂಧಿಸಿದ ಬಳಿಕ ಎಚ್ಚರಿಕೆ ಕೊಟ್ಟು ಬಿಡುಗಡೆ ಮಾಡಿದ್ದಾರೆ.

Chaitra Kulal

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

23 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

38 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago