News Karnataka Kannada
Monday, April 29 2024
ತಮಿಳು

ತಮಿಳು ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದ ರೂಪೇಶ್ ಶೆಟ್ಟಿ

ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ರೂಪೇಶ್​ ಶೆಟ್ಟಿ ಇದೀಗ ಕಾಲಿವುಡ್​ನಲ್ಲಿ ಅವಕಾಶ ಸಿಕ್ಕಿದ್ದು, ಮೊದಲ ಸಿನಿಮಾದಲ್ಲೇ ಖ್ಯಾತ ನಟ ಯೋಗಿ ಬಾಬು ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.
Photo Credit : NewsKarnataka

ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ರೂಪೇಶ್​ ಶೆಟ್ಟಿ ಇದೀಗ ಕಾಲಿವುಡ್​ನಲ್ಲಿ ಅವಕಾಶ ಸಿಕ್ಕಿದ್ದು, ಮೊದಲ ಸಿನಿಮಾದಲ್ಲೇ ಖ್ಯಾತ ನಟ ಯೋಗಿ ಬಾಬು ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ.

ಕನ್ನಡದ ಬಿಗ್ ಬಾಸ್ ನಲ್ಲಿ ವಿನ್ನರ್ ಆಗಿಯೂ ಹೊರಹೊಮ್ಮಿದ್ದ ರೂಪೇಶ್ ಶೆಟ್ಟಿ ತುಳು ಮತ್ತು ಕನ್ನಡ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಇದೀಗ ತಮಿಳಿನ ‘ಸನ್ನಿಧಾನಮ್ PO’ ಸಿನಿಮಾದಲ್ಲಿ ಅವರೊಂದು ಪಾತ್ರ ನಿಭಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗೆ ಮಧುರಾವ್ ಅವರು ಬಂಡವಾಳ ಹೂಡುತ್ತಿದ್ದಾರೆ. ಅಮುದ ಸಾರಥಿ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

‘ಸನ್ನಿಧಾನಮ್ PO’ ಚಿತ್ರಕ್ಕೆ ಈಗ ಎರಡನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಜೂನ್​ನಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು