ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನು ಪ್ರವೀಣ್ ಕುಮಾರ್ ಮಾಡಿದ್ದರು. ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಅವರ ಅಭಿಮಾನಿಗಳು ಮತ್ತು ಚಿತ್ರೋದ್ಯಮ ಕಂಬನಿ ಮಿಡಿದೆ.