ತಮಿಳು

ಬಹುಮುಖ ನಟ ‘ಚಿಯಾನ್’ ವಿಕ್ರಮ್ ಹೃದಯಾಘಾತ: ಕಾವೇರಿ ಆಸ್ಪತ್ರೆಗೆ ದಾಖಲು

ಬಹುಮುಖ ನಟ ‘ಚಿಯಾನ್’ ವಿಕ್ರಮ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಚೆನ್ನೈನಿಂದ ಹೊರಬರುತ್ತಿರುವ ಮಾಧ್ಯಮ ವರದಿಗಳ ಪ್ರಕಾರ, ನಟನನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ವರದಿಗಳ ಪ್ರಕಾರ, ವಿಕ್ರಮ್ ಅವರ ಸ್ಥಿತಿ ಸ್ಥಿರವಾಗಿದೆ.

ಇಂದು ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಲಿರುವ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ವಿಕ್ರಮ್ ಭಾಗವಹಿಸಬೇಕಿತ್ತು. ಹಠಾತ್ ಅನಾರೋಗ್ಯದ ಕಾರಣ ವಿಕ್ರಮ್‌ಗೆ 56 ವರ್ಷದ ವಿಕ್ರಮ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.

ಸುದ್ದಿ ತಿಳಿದ ವಿಕ್ರಮ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಶಾಕ್ ಆಗಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ವಿಕ್ರಮ್ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ತಮ್ಮ ನಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಶಿವ ಪುತ್ರುಡು (ತಮಿಳಿನಲ್ಲಿ ಪಿತಾಮಗನ್), ಅಪರಿಚಿತುಡು ಸೇರಿದಂತೆ ಹಲವಾರು ಸೂಪರ್‌ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮ್ಮ ನಟನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.

ವಿಕ್ರಮ್ ಅವರ ಪುತ್ರ ಧ್ರುವ 2019 ರಲ್ಲಿ ‘ಆದಿತ್ಯ ವರ್ಮ’ (ಅರ್ಜುನ್ ರೆಡ್ಡಿ ರಿಮೇಕ್) ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ್ದಾರೆ. ಇತ್ತೀಚೆಗೆ ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾದ ‘ಮಹಾನ್’ ಚಿತ್ರದಲ್ಲಿ ಧ್ರುವ ಮತ್ತು ವಿಕ್ರಮ್ ಒಟ್ಟಿಗೆ ನಟಿಸಿದ್ದಾರೆ. ವಿಕ್ರಮ್ ಅವರ ಮುಂಬರುವ ಚಿತ್ರ ಕೋಬ್ರಾ ಆಗಸ್ಟ್ 11 ರಂದು ತೆರೆಗೆ ಬರಲಿದೆ. ಈ ನಡುವೆ ಅವರು ಅನಾರೋಗ್ಯಕ್ಕೀಡಾಗಿರುವುದು ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.

Sneha Gowda

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

5 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

13 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

14 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

23 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

38 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

52 mins ago