News Karnataka Kannada
Saturday, May 04 2024
ತೆಲುಗು

ಅಧಿಕೃತ ಘೋಷಣೆ ಮಾಡಿದ ತಾರಾದಂಪತಿ – ಸಮಂತಾ-ನಾಗಚೈತನ್ಯ ದಾಂಪತ್ಯ ಅಂತ್ಯ;

Samantha
Photo Credit :

ಟಾಲಿವುಡ್: ನಟಿ ಸಮಂತಾ ಮತ್ತು ನಟ ನಾಗಚೈತನ್ಯ ಅವರ ವೈಯಕ್ತಿಕ ಜೀವನ ಇತ್ತೀಚೆಗೆ ಭಾರೀ ಚರ್ಚೆಯಲ್ಲಿದೆ. ಎಷ್ಟೋ ದಿನಗಳಿಂದ ಈ ತಾರಾದಂಪತಿ ಡಿವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇದೀಗ ಸ್ವತಃ ಇವರಿಬ್ಬರೇ ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಸಮಂತಾ ಮತ್ತು ನಾಗಚೈತನ್ಯ ಇಬ್ಬರೂ ತಂತಮ್ಮ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಒಂದೇ ರೀತಿಯ ಸಂದೇಶಗಳನ್ನು ಪೋಸ್ಟ್​ ಮಾಡಿದ್ದಾರೆ. ‘ನಾವಿಬ್ಬರೂ ಗಂಡ-ಹೆಂಡತಿಯ ಸಂಬಂಧ ಬಿಟ್ಟು ಪರಸ್ಪರ ದೂರವಾಗುವ ನಿರ್ಧಾರ ತೆಗೆದುಕೊಂಡಿದ್ದೇವೆ. ಒಂದು ದಶಕದ ಮಟ್ಟಿಗಿನ ಆಪ್ತಸ್ನೇಹವನ್ನು ನಾವು ಹೊಂದಿದ್ದೆವು. ಬಹುಶಃ ಅದೇ ನಮ್ಮಿಬ್ಬರ ಸಂಬಂಧದ ಸತ್ವವಾಗಿತ್ತು. ಇದರಿಂದಲೇ ಮುಂದೆಯೂ ನಮ್ಮಿಬ್ಬರ ನಡುವೆ ವಿಶೇಷ ನಂಟು ಮುಂದುವರಿಯುತ್ತದೆ ಎಂದು ನಂಬಿದ್ದೇವೆ’ ಎಂದು ಸಮಂತಾ ಮತ್ತು ನಾಗಚೈತನ್ಯ ಬರೆದಿದ್ದಾರೆ.

ಜೊತೆಗೆ, ತಮ್ಮ ಈ ಕಷ್ಟಕಾಲದಲ್ಲಿ ತಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮದವರು ತಮಗೆ ಬೆಂಬಲ ನೀಡಬೇಕು. ತಾವು ಮೂವ್​ ಆನ್​ ಆಗಲು ಅಗತ್ಯವಾದ ಪ್ರೈವೆಸಿ ಕೊಡಬೇಕು ಎಂದೂ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು