ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ ಆರ್ ಆರ್ ಆರ್ ಚಿತ್ರ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಇದ್ದು, ಅಮೆರಿಕ ಒಂದರಲ್ಲೇ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಜ್ಯೂ. ಎನ್ ಟಿಆರ್ ಮತ್ತು ರಾಮ್ ಚರಣ್ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಲಿದ್ದು, ಅಭಿಮಾನಿಗಳು ಸಿನಿಮಾ ನೋಡೋಕೆ ಕಾತುರದಿಂದಿದ್ದಾರೆ.
ಜ.7ರಂದು ಸಿನಿಮಾ ವಿಶ್ವದಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದ್ದು, ಅಮೆರಿಕದ ಸಿನಿಮಾರ್ಕ್ ಮಲ್ಟಿಪ್ಲೆಕ್ಸ್ ಸೇರಿದಂತೆ 1000ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಆರ್ ಆರ್ ಆರ್ ಸಿನಿಮಾ ಪ್ರದರ್ಶನ ಕಾಣಲಿದೆ.
ಈಗಾಗಲೇ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿದ್ದು, ಕೆಲವೇ ಗಂಟೆಗಳಲ್ಲಿ 37 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಈ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದು, ಡಿ.ವಿ. ದಾನಯ್ಯ ಸುಮಾರು 400 ಕೋಟಿ ರೂ. ಬಂಡವಾಳ ಹೂಡಿದ್ದಾರೆ.