ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್ಆರ್ಆರ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ದೂಳೆಬ್ಬಿಸುತ್ತಿದೆ. ಮಾ.25ರಂದು ಅದ್ದೂರಿಯಾಗಿ ವಿಶ್ವಾದ್ಯಂತ ‘ಆರ್ಆರ್ಆರ್’ ಸಿನಿಮಾ ರಿಲೀಸ್ ಆಯಿತು.
ಮಾ.25ರಂದು ಅದ್ದೂರಿಯಾಗಿ ವಿಶ್ವಾದ್ಯಂತ ರಿಲೀಸ್ ಆದ ಸಿನಿಮಾ ಮೂರೂ ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ತೆಲುಗಿನಲ್ಲಿ ಸಿದ್ಧವಾದ ಈ ಚಿತ್ರ ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗೆ ಡಬ್ ಆಗಿ ತೆರೆ ಕಂಡಿದೆ. ರಾಮ್ ಚರಣ್ ಮತ್ತು ಜ್ಯೂ. ಎನ್ಟಿಆರ್ ಅವರ ವೃತ್ತಿಜೀವನಕ್ಕೆ ಒಳ್ಳೆಯ ಮೈಲೇಜ್ ಸಿಕ್ಕಿದೆ. ಆಲಿಯಾ ಭಟ್ ಮತ್ತು ಅಜಯ್ ದೇವಗನ್ ಅವರು ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮೊದಲ ದಿನವೇ ‘ಆರ್ಆರ್ಆರ್’ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿತು. ಶುಕ್ರವಾರ ವಿಶ್ವಾದ್ಯಂತ 223 ಕೋಟಿ ರೂಪಾಯಿ ಕಮಾಯಿ ಆಗಿದೆ ಎಂದು ವರದಿ ಆಗಿತ್ತು. ಮೂರು ದಿನ ಕಳೆಯುವುದರೊಳಗೆ 500 ಕೋಟಿ ರೂಪಾಯಿ ಗಡಿ ಮುಟ್ಟಿದೆ.