Categories: ತೆಲುಗು

ಚಿಕ್ಕಬಳ್ಳಾಪುರದಲ್ಲಿ ಮಾ.19ರಂದು ಆರ್,ಆರ್,ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ

ಚಿಕ್ಕಬಳ್ಳಾಪುರ : ಬಹು ನಿರೀಕ್ಷಿತ ತೆಲುಗು ಸಿನಿಮಾ ಇದೇ ತಿಂಗಳಲ್ಲಿ ವಿಶ್ವದಾದ್ಯಾಂತ ತೆರೆ ಬರಲಿದ್ದು, ಆರ್.ಆರ್.ಆರ್ ಸಿನಿಮಾ ಬಗ್ಗೆ ಅಭಿಮಾನಿ ವಲಯದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹೊಂದಿದ್ದಾರೆ. ಚಿಕ್ಕಬಳ್ಳಪುರದಲ್ಲಿ ಇದೇ ತಿಂಗಳ 19ರಂದು ಆರ್,ಆರ್,ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ನಗರದ ಭೈಪಾಸ್ ರಸ್ತೆಯಲ್ಲಿ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಖ್ಯಾತ ಚಲನ ಚಿತ್ರ ನಿರ್ದೇಶಕ ಎಸ್.ಎಸ್ ರಾಜಮೌಳಿ ತಮ್ಮ ಸಿನಿಮಾ ಮೇಕಿಂಗ ಮೂಲಕ ದೊಡ್ಡಭರವಸೆ ಸೃಷ್ಟಿಸಿದ್ದಾರೆ, ಅದು ಆರ್,ಆರ್,ಆರ್ ಟ್ರೇಲರ್’ನಲ್ಲೂ ಸಾಬೀತಾಗಿದೆ, ಆದರೆ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿರುವಾಗ ದಕ್ಷಣ ಭಾರತದ ಕರ್ನಾಟಕದಲ್ಲಿ ಅದರಲ್ಲೂ ತೆಲುಗು ಪ್ರಭಾವ ಹೆಚ್ಚಾಗಿರುವ ಚಿಕ್ಕಬಳ್ಳಾಪುರದಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಮಾಡುತ್ತಿರುವುದು ಅಭಿಮಾನಿಗಳಿಗೆ ಸಂತೋಷವಾಗಿದೆ.

19 ರಂದು ಕಾರ್ಯಕ್ರಮ : ತೆಲುಗು ಚಲನ ಚಿತ್ರದ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಜೂ.ಎನ್,ಟಿ.ಆರ್ ಹಾಗೂ ರಾಮ್ ಚರಣ್ ಅಭಿನಯದ ಆರ್.ಆರ್.ಆರ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಬೈಪಾಸ್ ರಸ್ತೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಹಾಗೂ ಇದೇ ತಿಂಗಳ 19 ರಂದು ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧಿಕೃತ ಘೋಷಣೆ ಬಾಕಿ : ಚಿಕ್ಕಬಳ್ಳಾಪುರ ನಗರದಲ್ಲಿ ನಡೆಯಲಿರುವ ಆರ್.ಆರ್. ಆರ್ ಪ್ರಿಲೀಸ್ ಕಾರ್ಯಕ್ರಮದ ಬಗ್ಗೆ ಚಿತ್ರತಂಡದ ಮೇನೆಜ್ಮೆಂಟ್ ಅಧಿಕೃತವಾಗಿ ಘೋಷಿಸುವುದು ಮಾತ್ರ ಬಾಕಿ ಇದೆ. ಹಾಗೂ ಈಗಾಗಲೇ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಬೇಕಿರುವ ಅಗತ್ಯ ಕೆಲಸಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ.

Sneha Gowda

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

9 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

26 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

40 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

56 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago