ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.ಈ ಬಗ್ಗೆ ಸ್ವತಹ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಆರೋಗ್ಯವಂತನಾಗಿದ್ದು, ಯಾರೂ ಗಾಬರಿಯಾಗಬೇಡಿ. ನನ್ನ ಸಂಪರ್ಕದಲ್ಲಿರುವಂತ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
ಇತ್ತೀಚೆಗೆ ನಟ ಕಮಲ್ ಹಾಸನ್ ಕೂಡ ಕೊರೋನಾ ಪಾಸಿಟಿವ್ ಗೆ ಒಳಗಾಗಿದ್ದರು. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ, ಕೆಲ ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಅವರ ಬಳಿಕ, ಈಗ ನಟ ಅರ್ಜುನ್ ಸರ್ಜಾ ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.