ಹೈದರಾಬಾದ್: ಕನ್ನಡ ಚಿತ್ರರಂಗದಲ್ಲಿ ಭಾರಿ ಸುದ್ದಿ ಮಾಡಿದ್ದ ಡ್ರಗ್ಸ್ ಪ್ರಕರಣ ಈಗ ತೆಲಗು ಚಿತ್ರರಂಗದಲ್ಲೂ ಸಾಕಷ್ಟು ಸಂಚಲನ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇದ್ದಕ್ಕಿದ್ದಂತೆ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.
ಈಗಾಗಲೇ ಸುಪ್ರಸಿದ್ದ ತೆಲುಗು ಚಿತ್ರ ನಿರ್ದೇಶಕ ಪೂರಿ ಜಗನ್ನಾಥ್ ಅವರನ್ನು ಈಗಾಗಲೇ ವಿಚಾರಣೆ ನಡೆಸಿದ್ದು, ನಟಿ ಚಾರ್ಮಿ ಕೌರ್ ಅವರನ್ನು ಗುರುವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ 2015ರಿಂದ 2017ರವರೆಗಿನ ಬ್ಯಾಂಕಿನ ವಹಿವಾಟುಗಳ ವಿವರಗಳನ್ನು ಆಕೆ ಇಡಿಗೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚಾರ್ಮಿ, ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾಗಿ ಹೇಳಿದ್ದು ಅಲ್ಲದೆ ಅವರು ಕೇಳಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇಡಿಗೆ ಸಂಪೂರ್ಣ ಸಹಕರಿಸುತ್ತೇನೆ. ಮತ್ತೊಮ್ಮೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.