Bengaluru 24°C
Ad

“ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ”; ಸಪ್ತಮಿ ಗೌಡ ಆಡಿಯೋ ವೈರಲ್

Sapthami

ಬೆಂಗಳೂರು: ಯುವರಾಜ್ ಕುಮಾರ್ ಮತ್ತು ಶ್ರೀದೇವಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಬ್ಬರು ಡಿವೋರ್ಸ್​​ ನಿರ್ಧಾರಕ್ಕೆ ಬರಲು ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ. ಖುದ್ದು ಶ್ರೀದೇವಿಯವರೇ ಈ ಆರೋಪವನ್ನ ಮಾಡಿದ್ದಾರೆ. ಸಪ್ತಮಿ ಗೌಡ ಕೂಡ ಶ್ರೀದೇವಿ ಅವರ ವಿರುದ್ಧ ಮಾನನಷ್ಟ ಮೂಕದ್ದಮೆಯನ್ನೂ ಹೂಡಿದ್ದಾರೆ.

ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಆದರೆ ಈ ಕುರಿತಾಗಿ ಯಾವುದೇ ಸ್ಪಷ್ಟನೆ ಇಲ್ಲ.

ಆಡಿಯೋದಲ್ಲಿ. . . ʻಸರ್ ನಿಮಗೆ ಈಗಾಗಲೇ ವಿಷಯ ಗೊತ್ತಿರುತ್ತೆ ಏನಾಗಿದೆ ಏನು ಅಂತ. ನನ್ನ ಸೈಡ್ ಆಫ್ ದಿ ಸ್ಟೋರಿನೂ ಕೇಳಿ. ನನ್ನಿಂದ ತಪ್ಪಾಗಿಲ್ಲ ಎಂದು ನಾನು ಹೇಳ್ತಿಲ್ಲ. ಖಂಡಿತ ನನ್ನಿಂದ ತಪ್ಪಾಗಿದೆ. ನನ್ನ ಅಮ್ಮನ ಮೇಲೆ ಆಣೆ ಮಾಡಿ ಹೇಳ್ತೀನಿ ಸರ್ ನಾನು ಎಂದಿಗೂ ಸಹ ಗುರು (ಯುವ ಮೂಲ ಹೆಸರು) ಮದ್ವೆ ಬಿಟ್ಟು ಬಾ ಅಂತ ಯಾವತ್ತೂ ಹೇಳಿಲ್ಲ. ನೀವು ಬೇಕಿದ್ದರೆ ಅವನನ್ನು ಕೇಳಬಹುದು. ಯಾರನಾದರೂ ಕೇಳಬಹುದು. ಹೌದು ಇದು ನಿಮ್ಮ ಸೆಟ್‌ನಲ್ಲಿ ಆಯ್ತು ಅದಕ್ಕೆ ನಿಮಗೆ ನಮ್ಮ ಮೇಲೆ ಎಷ್ಟೇ ಕೋಪ ಇರಬಹುದು ಸರ್ ಪರವಾಗಿಲ್ಲ. ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿʼʼ ಎಂದಿದ್ದಾರೆ.

ಗುರುದು ಫಸ್ಟ್ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ಎಲ್ಲರೂ ಕಷ್ಟ ಪಟ್ಟು ಮಾಡಿರುವ ಸಿನಿಮಾ. ನಾನು ಮಧ್ಯೆ ಬರಲ್ಲ ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ. ಸರ್. ನನ್ನಿಂದ ಇನ್ನೊಬ್ಬರಿಗೆ ನೋವಾಗಿದೆ. ಆದರೆ ನಿಜವಾಗಿಯೂ ನಾನು ನಂಬಿ ಮಾಡಿದ್ದು ಸರ್ ಅದನ್ನ. ಗುರು ಬಂದು ನನ್ನ ಹತ್ರ ಅಷ್ಟು ಹೇಳಿದ ಮೇಲೆಯೇ ನಾನು ಮುಂದುವರಿದೆ. ಇಲ್ಲಾಂದ್ರೆ ನಾನು… ಸಾರಿ ಸರ್, ಜಸ್ಟ್ ಚಾನ್ಸ್ ಕೇಳ್ತಿದ್ದೀನಿ ಅಷ್ಟೇʼʼ ಎಂಬ ಮಾತುಗಳು ಆಡಿಯೊದಲ್ಲಿದೆ.

Ad
Ad
Nk Channel Final 21 09 2023
Ad