Bengaluru 22°C
Ad

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡಿದ ಕೋರ್ಟ್

ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿರೋ ನಟಿ ಹೇಮಾರನ್ನು ಇಂದು ಸಿಸಿಬಿ ಅಧಿಕಾರಿಗಳು ಆನೇಕಲ್ ಕೋರ್ಟ್ ಗೆ ನಟಿ ಹಾಜರು ಪಡಿಸಿದ್ದರು.

ಬೆಂಗಳೂರು: ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಬಂಧನಕ್ಕೆ ಒಳಗಾಗಿರೋ ನಟಿ ಹೇಮಾರನ್ನು ಇಂದು ಸಿಸಿಬಿ ಅಧಿಕಾರಿಗಳು ಆನೇಕಲ್ ಕೋರ್ಟ್ ಗೆ ನಟಿ ಹಾಜರು ಪಡಿಸಿದ್ದರು.

ಹೆಚ್ಚುವರಿ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ನೀಡಬೇಕು ಎಂದು ಅಧಿಕಾರಿಗಳು ಕೋರ್ಟ್‍ಗೆ ಮನವಿ ಮಾಡಿದ್ದರು. ವಾದ ಆಲಿಸಿದ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯವು 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ಹೇಮಾರನ್ನು ಕೊಟ್ಟಿದೆ.

ಕೋರ್ಟಿಗೆ ಬರುತ್ತಿದ್ದಂತೆಯೇ ಮತ್ತೆ ಮಾಧ್ಯಮಗಳ ಮೇಲೆ ಹೇಮಾ ಗರಂ ಆದರು. ‘ನಾನು ಮರ್ಡರ್ ಮಾಡಿದ್ದೀನಾ. ಅರ್ಧ ರಾತ್ರಿಯಲ್ಲಿ ಕರ್ಕೊಂಡು ಹೋಗಿ ಕಾಡಿನಲ್ಲಿ ಸಹಿ ಮಾಡಿಕೊಂಡಿಸಿಕೊಂಡಿದ್ದಾರೆ. ನಾನು ಏನು ಮಾಡಿದ್ದಿನಿ. ನನ್ನನ್ನು ನಡುರಾತ್ರಿಯಲ್ಲಿ ಯಾಕೆ ಹಂಗೆ ಕರೆದುಕೊಂಡು ಹೋದ್ರು. ಇಲ್ಲಿಯವರೆಗೆ ನೀವು ಮಾಧ್ಯಮದವರು ಮಾತನಾಡಿಲ್ಲ. ಈಗಲಾದ್ರು ಮಾತನಾಡಿ’ ಎಂದು ಗರಂ ಆದರು.

ಹೆಚ್ಚಿನ ವಿಚಾರಣೆಗಾಗಿ ಹೇಮಾರನ್ನು ಸಿಸಿಬಿ ವಶಕ್ಕೆ ನೀಡುವಂತೆ ಕೋರ್ಟಿಗೆ ಸಿಸಿಬಿ ಪರ ವಕೀಲರು ಮನವಿ ಮಾಡಿಕೊಂಡರು. ಪಿಪಿ ವಾದಕ್ಕೆ ಹೇಮಾ ಪರ ವಕೀಲರ ಆಕ್ಷೇಪ ವ್ಯಕ್ತ ಪಡಿಸಿದರು. ಸಂತೋಷ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಬ್ಲಡ್ ಟೆಸ್ಟ್ ಮಾಡಲಾಗಿದೆ.

ನ್ಯಾಯಾಲಯ ಖಾಸಗಿ ಆಸ್ಪತ್ರೆ ವರದಿಗೆ ಮನ್ನಣೆ ನೀಡಬಾರದು. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಹಾಗಾಗಿ ಸಿಸಿಬಿ ಕಸ್ಟಡಿಗೆ ನೀಡಬಾರದು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು ಹೇಮಾ ಪರ ವಕೀಲರು. ವಾದ ಪ್ರತಿವಾದ ಅಲಿಸಿದ ನ್ಯಾಯಾಧೀಶರು ಮಧ್ಯಾಹ್ನ ಮೂರು ಗಂಟೆಗೆ ಆದೇಶ ಕಾಯ್ದಿರಿಸಿದ್ದರು.

ಮೂರು ಗಂಟೆಯ ನಂತರ ಆನೇಕಲ್ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎಸ್ ಸಲ್ಮಾ ಅವರು 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ಸಿಸಿವಿ ವಶಕ್ಕೆ ಪಡೆದ ನಂತರ ಕೋರ್ಟ್ ನಿಂದ ಹೊರಬಂದ ವೇಳೆ ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು ಹೇಮಾ ಮತ್ತು ಆಕೆಯ ವಕೀಲ ಪಟಾಪಟ್ ಪ್ರಕಾಶ್. ಬಳಿಕ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಹಾಕಲಾಗುವುದು ಎಂದರು.

ಹೇಮಾರನ್ನು ನಾಳೆ ಸಂಜೆ 6 ಗಂಟೆವರೆಗೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ನಾಳೆ ಸಂಜೆ 6 ಗಂಟೆ ವೇಳೆಗೆ ಮತ್ತೆ ನ್ಯಾಯಾಲಯದ ಮುಂದೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ.

 

 

Ad
Ad
Nk Channel Final 21 09 2023
Ad