ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್ ರಾವ್ ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರ ಇಂದು ಜನ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಜಯ್ ರಾವ್ ಹುಟ್ಟುಹಬ್ಬದ ಪ್ರಯುಕ್ತ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ.
ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ ಎನ್ನಬಹುದು. ಎಕ್ಸ್ಕ್ಯೂಸ್ ಮಿ ಸಿನಿಮಾ ಮೂಲಕ ಅಜಯ್ ರಾವ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈ ಸಿನಿಮಾ ಬದುಕಿನಲ್ಲಿ ಇದು ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತು.
ಜನ್ಮದಿನದ ಪ್ರಯುಕ್ತ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ್ದು ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ. ʻಯುದ್ಧಕಾಂಡʼ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಆಯಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ.