Bengaluru 23°C
Ad

ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆ

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ.  ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ.

ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರವಾಗಿದೆ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Ad
Ad
Nk Channel Final 21 09 2023
Ad